ದಾವಣಗೆರೆ: ದಾವಣಗೆರೆಯ ಆಧ್ಯಾತ್ಮಿಕ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಅಕ್ಟೋಬರ್ 5 ರಂದು ಭಾನುವಾರ ಸಂಜೆ 5 ಗಂಟೆಗೆ ನಗರದ ಜಯದೇವ ವೃತ್ತದ ಹತ್ತಿರವಿರುವ ಶ್ರೀ ಶಂಕರಮಠದ ಹೊರಾಂಗಣದಲ್ಲಿ ಸರ್ವ ಸದಸ್ಯರ ಮಹಾಸಭೆಯನ್ನು ಕರೆಯಲಾಗಿದೆ ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‍ಶೆಣೈ ತಿಳಿಸಿದ್ದಾರೆ.
ಶ್ರೀ ಗಾಯತ್ರಿ ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್‍ರವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ 25 ವರ್ಷದ ಬೆಳ್ಳಿಹಬ್ಬ ಆಚರಿಸುವ ಕುರಿತು ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಗ್ಗೆ ವಿಚಾರ ವಿನಿಮಯಕ್ಕಾಗಿ ಈ ಸಭೆ ಕರೆಯಲಾಗಿದ್ದು ಆಧ್ಯಾತ್ಮ ಪರಂಪೆಯ ಸಾರ್ವಜನಿಕರು, ಸದ್ಭಕ್ತರು ಶ್ರೀ ಗಾಯತ್ರಿ ಪರಿವಾರದ ಸರ್ವ ಸದಸ್ಯರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಪರಿವಾರದ ಖಜಾಂಚಿ ಪುರುಷೋತ್ತಮ ಪಟೇಲ್ ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


