• ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಹಾಗೂ ಹೆಗ್ಗಡೆಯವರ ತೇಜೋವಧೆ ಬಗ್ಗೆ ರೂಪಿಸಿದ ಷಡ್ಯಂತ್ರಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ನ್ಯಾಯಯುತ ತನಿಖೆಗೆ ಅನುಕೂಲ ಮಾಡಿಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಸಚಿವರು ಹಾಗೂ ಎಸ್.ಐ.ಟಿ. ತಂಡದ ಎಲ್ಲಾ ಆಧಿಕಾರಿಗಳಿಗೆ ಧನ್ಯವಾದ ಸಲ್ಲಿಸಲು ನಿರ್ಧರಿಸಲಾಯಿತು.
• ಸಾಮಾಜಿಕ ಜಾಲತಾಣಗಳು ಹಾಗು ದೃಶ್ಯಮಾಧ್ಯಮಗಲ್ಲಿ ಆಗುತ್ತಿರುವ ಸುಳ್ಳುಸುದ್ದಿಯ ಪ್ರಸಾರವನ್ನು ತಡೆಗಟ್ಟಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.
• ಶ್ರದ್ಧಾಕೇಂದ್ರಗಳು ಹಾಗೂ ಧಾರ್ಮಿಕ ನಂಬಿಕೆಗಳ ವಿರುದ್ಧ ಹೇಳಿಕೆ ನೀಡಿ ಶಾಂತಿಭಂಗ ಮಾಡುತ್ತಿರುವ ಸಂಘ-ಸಂಸ್ಥೆಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು.
• ಮುಂದೆ ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆದರೆ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಲಾಗುವುದು.
• ಇಂತಹ ಸಂಚುಗಳು ಆಗಾಗ ನಡೆಯುತ್ತಿರುವುದರಿಂದ ಧರ್ಮಸಂರಕ್ಷಣಾ ಸಮಿತಿಯನ್ನು ಬಲಪಡಿಸಿ ವರ್ಷಕ್ಕೆ ಒಂದು ಬಾರಿ ಇಂತಹ ಸಮಾವೇಶವನ್ನು ಅಲ್ಲಲ್ಲಿ ಆಯೋಜಿಸಬೇಕು.
• ಎಲ್ಲರೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ದೃಢಸಂಕಲ್ಪದಿಂದ ನಿಂತು ಧರ್ಮ ಸಂರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿರುತ್ತೇವೆ ಎಂದು ನಿರ್ಧರಿಸಲಾಯಿತು.
• ಠರಾವಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಗೃಹಸಚಿವರು ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಕಳುಹಿಸಲು ನಿರ್ಧರಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ