ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸಪ್ಟೆಂಬರ್ 14 ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದಲ್ಲಿ ಶಿಬಿರಾರ್ಥಿಗಳಿಗೆ ಭಜನೆ ಹಾಡುವ ತರಬೇತಿ ನೀಡಿದ ಗಾಯಕಿ ಅರ್ಚನಾ ಉಡುಪರವರನ್ನು ಹೇಮಾವತಿ ವಿ. ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು.
ಮಾಣಿಲ ಶ್ರೀಧಾಮ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಸ್ವಾಮೀಜಿಯವರು, ಸೋನಿಯಾ ವರ್ಮ, ಭಜನಾ ಕಮ್ಮಟದ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ ಅಧ್ಯಾಪಕ ನಿಶಾಂತ್ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ

.png)
