ನಂತೂರು: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ಅವರು 14ರ ವಯೋಮಾನ ವಿಭಾಗದ 50 ಮೀ., 100 ಮೀ. ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 3 ಚಿನ್ನದ ಪದಕಗಳನ್ನು ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿದ್ದಾರೆ.
ಅಲ್ಲದೆ 3 ಸ್ಪರ್ಧೆಗಳಲ್ಲಿಯೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಾತ್ರವಲ್ಲದೇ ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಲು ದ.ಕ. ಜಿಲ್ಲಾ ಮಟ್ಟದ ರಿಲೇ ತಂಡವನ್ನು ಪ್ರತಿನಿಧಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


