ಮಂಗಳೂರು: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಬೆಂಗಳೂರು, ಶ್ರೀ ರಾಮಕೃಷ್ಣ ಮಠ ಮಂಗಳಾದೇವಿ ಮಂಗಳೂರು, ಬಹುವಚನಂ ಪುತ್ತೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ “ವಿಶ್ವ ಬನ್ನಂಜೆ ನಮನ” ಕಾರ್ಯಕ್ರಮವು ಸೆಪ್ಟೆಂಬರ್ 21ರಂದು ಶ್ರೀ ರಾಮಕೃಷ್ಣ ಮಠ, ಮಂಗಳಾದೇವಿ ಇಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಶ್ರೀ ರಾಮಕೃಷ್ಣ ಮಠ ಮಂಗಳೂರಿನ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದಿರೆಯ ಜೈನ ಮಠದ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಆಶೀರ್ವಚಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಉಚ್ಛ ನ್ಯಾಯಮೂರ್ತಿಗಳಾದ ಶ್ರೀ ವೇದವ್ಯಾಸ ಆಚಾರ್ಯ ಶ್ರೀಶಾನಂದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ “ಬನ್ನಂಜೆ ಗೌರವ ಸನ್ಮಾನ”ವನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವ ಕುಲಾಧಿಪತಿಗಳಾದ ಡಾ. ಸಿಎ ಎ. ರಾಘವೇಂದ್ರ ರಾವ್ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆಗೆ ಸನ್ಮಾನಿಸಲಾಯಿತು. ಈ ಸನ್ಮಾನವನ್ನು ಶ್ರೀ ವೇದವ್ಯಾಸ ಆಚಾರ್ಯ ಶ್ರೀಶಾನಂದರು ಪ್ರದಾನ ಮಾಡಿದರು.
ಅಧ್ಯಕ್ಷರು ಹಾಗೂ ಗಣ್ಯರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾ, ಡಾ. ರಾಘವೇಂದ್ರ ರಾವ್ ಅವರ ದೂರದೃಷ್ಟಿ ನಾಯಕತ್ವವನ್ನು ಶ್ಲಾಘಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯವನ್ನು ಹೆಸರಾಂತ ಶೈಕ್ಷಣಿಕ ಸಂಸ್ಥೆಯಾಗಿ ನಿರ್ಮಿಸಿದಲ್ಲಿ ಹಾಗೂ ಪ್ರಾದೇಶಿಕ ಶೈಕ್ಷಣಿಕ–ಸಾಂಸ್ಕೃತಿಕ ಅಭಿವೃದ್ಧಿಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಅವರು ಕೊಂಡಾಡಿದರು.
ಪ್ರಸಿದ್ಧ ಜ್ಯೋತಿಷಿ ಪಾವಂಜೇ ವಾಸುದೇವ ಭಟ್ ಹಾಗೂ ಧರ್ಮದರ್ಶಿ ಹರಿಕೃಷ್ಣ ಪುನರೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


