ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

Upayuktha
0


 

ಮಂಗಳೂರು: ನಾಟ್ಯ ಮಯೂರಿ ಟ್ರಸ್ಟ್ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ಸೆಪ್ಟೆಂಬರ್ 27ರಂದು ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರಶಸ್ತಿ, ಪ್ರದಾನ ಕಾರ್ಯಕ್ರಮವು ಸೆಪ್ಟೆಂಬರ್ 27ರಂದು  ಕನ್ನಡ ಭವನದಲ್ಲಿ ನಡೆಯಲಿದೆ. ಟ್ರಸ್ಟಿನ  ಸ್ಥಾಪಕರಾದ ಪ್ರೇಮಾಂಜಲಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

                          

ಡಾ. ಮಾಲತಿ ಶೆಟ್ಟಿ ಮಾಣೂರುರವರು ಕಳೆದ 20 ವರುಷಗಳಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಳೆದ 12 ವರುಷಗಳಿಂದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 9 ಕೃತಿಗಳನ್ನು ಪ್ರಕಟಿಸಿದ್ದಾರೆ. ಇತರ ಹಿರಿಯ ಹಿರಿಯ ಲೇಖಕರ 45 ಕೃತಿಗಳನ್ನು ಸರಣಿ ಕೃತಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಪ್ರೀತಿ ಮೂಡುವ ಸಲುವಾಗಿ ಉಚಿತವಾಗಿ ಯಶಸ್ವಿಯಾಗಿ 114 ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮವನ್ನು ಮಾಡಿದ್ದಾರೆ. ಮಂಗಳೂರಿನ ಅತ್ತಾವರದ ಸಾಹಿತ್ಯ ನಂಧನದಲ್ಲಿ ವಾಸವಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top