ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ಸನ್ಮಾನ
ಹಾಸನ: ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ಹಾಗೂ ಆಶಾನಾದಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಹಾಸನದ ಸಾಹಿತಿಗಳು ನಾಟಕಕಾರರು ಗೊರೂರು ಅನಂತರಾಜು ರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟ, ಮೈಸೂರು ರಮಾನಂದ್ ಅವರು ನೀಡಿ ಸನ್ಮಾನಿಸಿದರು.
ಸಾಹಿತ್ಯ ಕ್ಷೇತ್ರದಲ್ಲಿ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮ ಕ್ರಿಯಾಶೀಲ ವ್ಯಕ್ತಿತ್ವದಿಂದ ರಂಗಭೂಮಿ ನಟರು, ಗಾಯಕರು, ನೃತ್ಯ ಚಿತ್ರ ಕಲಾವಿದರು ಮೊದಲಾಗಿ ಪ್ರತಿಭ್ವಾನಿತ ಕಲಾವಿದರನ್ನು ಸಂದರ್ಶಿಸಿ ಪತ್ರಿಕೆಗಳ ಮೂಲಕ ಜನತೆಗೆ ಪರಿಚಯಿಸುವ ಸದಾ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿರುವ ಲೇಖಕರು ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ರಾಜ್ಯ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯ ಗೌರವ ಅಧ್ಯಕ್ಷರು ಗೊರೂರು ಅನಂತರಾಜು ರವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸೇವೆಯು ಸಮಾಜಕ್ಕೆ ಇನ್ನೂ ಹೆಚ್ಚಿನದಾಗಿ ದೊರೆಯಲೆಂದು ಶುಭ ಹಾರೈಸಿ ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ರಾಜ್ಯಾಧ್ಯಕ್ಷರು ಮಧು ನಾಯ್ಕ್ ಲಂಬಾಣಿಯವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


