ಶತಮಾನಗಳೇ ಕಲಿತರೂ ವಿದ್ಯೆಗೆ ವಯಸ್ಸಿಲ್ಲ: ಡಾ. ಬಿ.ಎ ಕುಮಾರ ಹೆಗ್ಡೆ

Upayuktha
0

 


ಉಜಿರೆ: ಚರಿತ್ರೆಯ ಆಳವಾದ ಜ್ಞಾನ ನಾವು ತಿಳಿಯಬೇಕು. ಹಿಂದಿನ ಕಾಲಘಟ್ಟದವರು ಬಹಳ ಸೂಕ್ಷ್ಮವಾಗಿ ಆಲೋಚನೆ ಮಾಡುತ್ತಾ ಇದ್ದರು. ಅವರ ವಿದ್ಯೆಗೆ ಸಾಟಿಯಿಲ್ಲ, ಶತಮಾನಗಳೇ ಕಲಿತರೂ ವಿದ್ಯೆಗೆ ವಯಸ್ಸಿಲ್ಲ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಹೇಳಿದರು.


ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಹಾಗೂ ಸಂತಕವಿ ಕನಕದಾಸ ಮತ್ತು ತತ್ವಪದ ಕಾರರ ಅಧ್ಯಯನ ಕೇಂದ್ರ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ತತ್ವಪದಗಳು - ಸಾಂಸ್ಕೃತಿಕ ಅನುಸಂಧಾನ ಎರಡು ದಿನಗಳ ರಾಷ್ಟೀಯ ವಿಚಾರ ಸಂಕಿರಣದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಹಿಂದಿನ ಸ್ಥಿತಿಗತಿಗಳನ್ನು ಅರಿತು ಬಹಳ ಖರಾರುವಕ್ಕಾಗಿ ತತ್ವಪದಕಾರರು ಸಮಾಜಕ್ಕೆ ಕೊಡುಗೆಗಳನ್ನು ನೀಡಿದ್ದಾರೆ. ತತ್ವಪದಕಾರರು ಕೊಟ್ಟ ವಿಷಯಗಳು ಅಧ್ಯಯನಕ್ಕೆ ಉತ್ತಮವಾದ ವಿಷಯಗಳಾಗಿವೆ. ಅವರಿಗೆ ತಿಳಿದ ಅಥವಾ ಅನುಭವಕ್ಕೆ ಬಂದ ವಿಷಯಗಳನ್ನು ತತ್ವಪದಕಾರರು ಪದ್ಯಗಳ ಮೂಲಕ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತತ್ವಪದಗಳನ್ನು ರಚಿಸಿದ್ದಾರೆ ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. "ಈ ಕಾರ್ಯಕ್ರಮಕ್ಕೆ ವಿಧ್ಯಾರ್ಥಿಗಳ ನಾಡಿ ಮಿಡಿತವನ್ನು ಅರಿತು ಮಾಹಿತಿ ನೀಡುವ ಸಂಪನ್ಮೂಲ ವ್ಯಕ್ತಿಗಳು ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳು ಬಹಳ ಚುರುಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.ಬಹಳ ತಾಳ್ಮೆಯಿಂದ ಪ್ರೀತಿಯಿಂದ ಕಾರ್ಯಕ್ರಮ ನಡೆಸಲು ಸಹಕರಿಸಿದ್ದಾರೆ ಎಂದರು.


ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಾಧ್ಯಾಪಕಿ ಜಯಶ್ರೀ ಹಾಗೂ ವಿದ್ಯಾರ್ಥಿಗಳಾದ ಅನಿರುದ್ಧ್, ಅನನ್ಯ, ಮನೀಷ್ ಮತ್ತು ಶೇಖರ ಅಭಿಪ್ರಾಯ ಹಂಚಿಕೊಂಡರು.


ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಪ್ರಾಧ್ಯಾಪಕರು, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ನಾಗಣ್ಣ ಡಿ. ಎ. ಸ್ವಾಗತಿಸಿ, ಕನ್ನಡ ವಿಭಾಗದ ಪ್ರಾಧ್ಯಾಪಕಿ ಭವ್ಯಶ್ರೀ ಬಲ್ಲಾಳ್ ನಿರೂಪಿಸಿ ವಂದಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top