ಬೆಂಗಳೂರು: ಧರ್ಮಸ್ಥಳದ ಷಡ್ಯಂತ್ರದ ಬಗ್ಗೆ ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ದೆಹಲಿಯಲ್ಲಿ ಭೇಟಿಯಾಗಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡು ಬುರುಡೆ ಷಡ್ಯಂತ್ರದ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್ ಅಶೋಕ, ಸಂಸದರು ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

