ಗಾನ ನೃತ್ಯ ಅಕಾಡೆಮಿ- ಆರೋಹಣ: ಸಮೂಹ ನೃತ್ಯ ಕಾರ್ಯಕ್ರಮ ಸೆ.7ಕ್ಕೆ

Upayuktha
0


ಮಂಗಳೂರು: ಗಾನ ನೃತ್ಯ ಅಕಾಡೆಮಿ ಮಂಗಳೂರು ಇದರ ನಿರ್ದೇಶಕಿ ಗುರು ವಿದ್ಯಾಶ್ರೀ ರಾಧಾಕೃಷ್ಣ ಇವರ ಹಿರಿಯ ವಿದ್ಯಾರ್ಥಿಗಳಿಂದ ಆರೋಹಣ ಎಂಬ ಸಮೂಹ ನೃತ್ಯ ಕಾರ್ಯಕ್ರಮವು ಸೆಪ್ಟೆಂಬರ್ 7 ರಂದು ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಸಂಜೆ 5 ಗಂಟೆಗೆ ಜರಗಲಿದೆ.


ಸಂಸ್ಥೆಯ ಕಲಾವಿದರ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ ಕೊಡುವ ಈ ಆರೋಹಣ ಕಾರ್ಯಕ್ರಮವನ್ನು ಕಳೆದ 29 ವರ್ಷಗಳಿಂದ ನಡೆಸಿಕೊಂಡು ಬರುತ್ತಾ ಇದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ ನಿತ್ಯಾನಂದ ರಾವ್ ಇವರು ನೆರವೇರಿಸಲಿದ್ದಾರೆ.

ನೃತ್ಯ ಕಾರ್ಯಕ್ರಮದ ಹಿಮ್ಮೇಳದಲ್ಲಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಹಾಡುಗಾರಿಕೆ, ರಶ್ಮಿ ಉಡುಪ ಇವರ ನಟುವಾಂಗ, ಬಾಲಚಂದ್ರ ಭಾಗವತ್ ಇವರ ಮೃದಂಗ ಹಾಗೂ ರಾಜಗೋಪಾಲ್ ಕಾಞಂಗಾಡ್ ಇವರ ಕೊಳಲಿನ ಸಹಕಾರವಿರುತ್ತದೆ. ಕಲಾಸಕ್ತರಿಗೆ ಈ ಕಾರ್ಯಕ್ರಮಕ್ಕೆ ಮುಕ್ತ ಅವಕಾಶವಿರುತ್ತದೆ ಎಂದು ಕಾರ್ಯದರ್ಶಿ ರಾಧಾಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top