ಸುರತ್ಕಲ್: ನಮ್ಮ ಬಾಳಿಗೆ ಮಾರ್ಗದರ್ಶಕರಾಗಿರುವ ಗುರುಗಳನ್ನು ಗೌರವಿಸುವುದು ಶೇಷ್ಠತರವಾದುದು ಎಂದು ನವ ಮಂಗಳೂರು ಲಯನ್ಸ್ ಕ್ಲಬ್ ಆಧ್ಯಕ್ಷ ಅರವಿಂದ ಲಿಂಗರಾಜು ನುಡಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಲಯನ್ಸ್ ಕ್ಲಬ್ ನವ ಮಂಗಳೂರು ಸಹಯೋಗದಲ್ಲಿ ಆಯೋಜಿಸಿದ್ದ ಗುರು ವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕಿಯರನ್ನು ಸಮ್ಮಾನಿಸಿ ಮಾತನಾಡಿದರು.
ಜಿಲ್ಲಾ ಲಯನ್ಸ್ ಸಂಪುಟದ ಲೆಕ್ಕ ಪತ್ರ ವಿಭಾಗದ ಜಿಲ್ಲಾಧ್ಯಕ್ಷ ಮನೋಜ್ ಕುಮಾರ್ ಮಾತನಾಡಿ, ಶಿಕ್ಷಕರ ವಾತ್ಸಲ್ಯಭರಿತ ಪ್ರೋತ್ಸಾಹದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಶೋಭಾ, ಹಿರಿಯ ಶಿಕ್ಷಕಿ ಸುಕೇಶಿನಿ, ಸಿಂತಿಯ, ನೀತಾ ತಂತ್ರಿ, ರೂಪಾ ಮತ್ತು ಸಹಾಯಕ ಸಿಬ್ಬಂದಿಗಳನ್ನು ಸಮ್ಮಾನಿಸಲಾಯಿತು. ಶಾಲಾ ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಚಿತ್ರಾಪುರ ಅವರನ್ನು ಗೌರವಿಸಲಾಯಿತು.
ಜಿಲ್ಲಾ ಲಯನ್ಸ್ ವಲಯ ರಾಯಭಾರಿ ಕರುಣಾಕರ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಂಸ್ಕೃತಿ ಮತ್ತು ಸಂಸ್ಕಾರಾಧಾರಿತ ಶಿಕ್ಷಣವನ್ನು ನೀಡಬೇಕಾಗಿದೆ ಎಂದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಮುರಳೀಧರನ್ ಟಿ.ಕೆ. ಮತ್ತು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಶುಭ ಹಾರೈಸಿದರು.
ಹಳೆ ವಿದ್ಯಾರ್ಥಿ ಸಂಘದ ಸದಸ್ಯ ತೇಜಪಾಲ್ ಪುತ್ರನ್, ಶ್ರೀನಿವಾಸ ರಾವ್, ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಸೆಂತಿಲ್, ಕೋಶಾಧಿಕಾರಿ ಸಂತೋಷ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳ, ಸದಸ್ಯೆ ಶಶಿಕಲಾ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಮಾತನಾಡಿ, ನವ ಮಂಗಳೂರು ಲಯನ್ಸ್ ಕ್ಲಬ್ ಶಿಕ್ಷಕ ವೃಂದದ ಸೇವೆಯನ್ನು ಗುರುತಿಸಿ ಗೌರವಿಸುವ ಮೂಲಕ ಉತ್ತಮ ಪರಂಪರೆಯನ್ನು ರೂಪಿಸಿದೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಶೋಭಾ ವಂದಿಸಿದರು. ವಿದ್ಯಾರ್ಥಿ ಗಗನ್ ಕಾರ್ಯಕ್ರಮ ನಿರೂಪಿಸಿದರು. ಡಾ. ಎಸ್. ರಾಧಾಕೃಷ್ಣನ್ ಭಾವ ಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ