ಸಾಲಿಗ್ರಾಮ: ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ- 2025 ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಕಾರಂತರ ಹಿತೈಷಿ, ಸಮಾಜ ಸೇವಕಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಿಂತಕಿ ಶ್ರೀಮತಿ ಎಚ್. ಶಕುಂತಳಾ ಭಟ್ ಆಯ್ಕೆಯಾಗಿದ್ದಾರೆ.
ಕಥೆಗಾರರಾಗಿ ಕವಿಯಾಗಿ, ಇವರ ಸಾಧನೆ ಬೆಲೆ ಕಟ್ಟಲಾಗದು. ಸುಮಾರು 90 ಪ್ರಕಟವಾದ ಓಟ್ಟು ಗ್ರಂಥಗಳನ್ನು ಬರೆದಿದ್ದಾರೆ. ಕನ್ನಡ ಹಾಗೂ ತುಳು ಭಾಷೆಯಲ್ಲಿ ಇವರು ಸಲ್ಲಿಸಿದ ಸಾಹಿತ್ಯ ಸೇವೆ ಅಪಾರ. ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ಶ್ರೀಮತಿ ವೈದೇಹಿ, ಹಾಗೂ ಡಾ ನಾ ಮೊಗಸಾಲೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಪಡೆದವರಾಗಿದ್ದಾರೆ.
ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.
ಗೆಳೆಯರ ಬಳಗ ಕಾರಂತ ಪುರಸ್ಕಾರ-2025ನ್ನು ಅಕ್ಟೋಬರ 17ರ ಶುಕ್ರವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


