ತೆಂಕನಿಡಿಯೂರು: ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ ಉಡುಪಿ, ಚೈತನ್ಯ ಯುವಕ ಮಂಡಲ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಹಿಂದಿ ವಿಭಾಗ ಹಾಗೂ ಐ.ಕ್ಯೂ.ಎ.ಸಿ ಆಶ್ರಯದಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅಮುಕ್ತ್‌ನ ಅಧ್ಯಕ್ಷರು ಹಾಗೂ ಪಾಂಪೈ ಕಾಲೇಜು ಐಕಳ ಇದರ ಹಿಂದಿ ಪ್ರಾಧ್ಯಾಪಕರಾದ ಡಾ.ಎಸ್.ಎ ಮಂಜುನಾಥ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಂವಿಧಾನ ರಚನೆಯ ಸಂದರ್ಭ ಹಿಂದಿ ಭಾಷೆಯ ಕುರಿತಾಗಿ ನಡೆದ ಚರ್ಚೆ ಹಾಗೂ ನಂತರದ ಬೆಳವಣಿಗೆಗಳ ವಿವರಣೆ ನೀಡುವುದರ ಜೊತೆಗೆ ಹಿಂದಿ ದಿನಾಚರಣೆಯ ಉಗಮ ಮತ್ತು ಸಂದರ್ಭಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಅಧ್ಯಕ್ಷೀಯ ನುಡಿಗಳನ್ನಾಡಿದರೆ ಹಿಂದಿ ವಿಭಾಗ ಮುಖ್ಯಸ್ಥರಾದ ಡಾ. ಆಶಾ ಸಿ ಇಂಗಳಗಿ ಕಾರ್ಯಕ್ರಮದ ಔಚಿತ್ಯ ತಿಳಿಸಿ ಸರ್ವರನ್ನೂ ಸ್ವಾಗತಿಸಿದರು. ವಿದ್ಯಾರ್ಥಿನಿ ದೀಕ್ಷಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರೆ , ಅಲ್ಮಸ್ ಧನ್ಯವಾದ ಸಮರ್ಪಿಸಿದರು, ರುಕ್ಸಾನ ಕಾಯಕ್ರಮ ನಿರೂಪಿಸಿದರು . ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಹೆಚ್.ಎಂ ಹಿಂದಿ ದೇಶ ಭಕ್ತಿಗೀತೆಯನ್ನು ಹಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ