ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ಕಾಮತ್

Chandrashekhara Kulamarva
0

 



ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು.


ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು, ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.


ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28 ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದ್ದು ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ. ಆ ಕಾರಣಕ್ಕಾಗಿ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top