
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ 2026 ನೇ ಸಾಲಿನಲ್ಲಿ ಚೀನಾದ ಶಾಂಫೈನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಗೆ (World Skill Competition - 2026) ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್ ('ಇಂಡಿಯಾ ಸ್ಕಿಲ್ಸ್ ಕಾಂಪಿಟಿಷನ್ ಕರ್ನಾಟಕ-2025) ಸ್ಪರ್ಧಾ ಕಾರ್ಯಕ್ರಮವನ್ನು 63 ಪ್ರಕಾರದ ಕೌಶಲ್ಯ ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದೆ.
2001ರ ಜನವರಿ 1ರಂದು ಅಥವಾ ನಂತರದಲ್ಲಿ ಜನಿಸಿದ ಅಭ್ಯರ್ಥಿಗಳಿಗೆ 63 ಪ್ರಕಾರದ ಕೌಶಲ್ಯ ವಿಭಾಗಗಳಲ್ಲಿ ಹಾಗೂ 2004 ರ ಜನವರಿ 1ರಂದು ಅಥವಾ ನಂತರದಲ್ಲಿ ಜನಿಸಿದ ಅಭ್ಯರ್ಥಿಗಳಿಗೆ 50 ಪ್ರಕಾರದ ಕೌಶಲ್ಯ ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಈ ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ನಿಗಮದ ವತಿಯಿಂದ ಒದಗಿಸಲಾಗುತ್ತದೆ. ವೆಬ್‍ಸೈಟ್ https://www.skillindiadigital.gov.in/home ಮೂಲಕ ಉಚಿತವಾಗಿ ನೋಂದಣಿ ಮಾಡಬಹುದು. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಉರ್ವ ಮಾರುಕಟ್ಟೆ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ದೂರವಾಣಿ ಸಂಖ್ಯೆ 9606492216 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ