ಕಬಡ್ಡಿ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಬಾಲಕರ ತಂಡ ದ್ವಿತೀಯ

Upayuktha
0


ಉಪ್ಪಿನಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಉಪ್ಪಿನಂಗಡಿ ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ. ತಂಡದಲ್ಲಿ ದ್ವಿತೀಯ ಪಿಯುಸಿ ವಿಭಾಗದ ಶಂಕರ ದೊಡ್ಡಮನಿ, ಗೌತಮ್.ಸಿ , ಸಾಯಿಕುಮಾರ್, ಎ.ತಶ್ವಿತ್ ರಾಜ್ ಪೂಜಾರಿ, ಸಿಂಚನ್, ಹೇಮಂತ್ ಜೆ.ಕೆ,  ಶ್ರೀನಿವಾಸ್ ಎಚ್.ಟಿ, ಪವನ್ ಕುಮಾರ್ ಹಾಗೂ ಪ್ರಥಮ ಪಿಯುಸಿಯ ಕಿಶನ್ ಕೆ.ವೈ, ಜಿಷ್ಣು ಎನ್,ಪವನ್ ಕುಮಾರ್ , ಯಶ್ವಿತ್ ಕೆ.ಡಿ ಭಾಗವಹಿಸಿದರು. ಪ್ರಥಮ ವಿಜ್ಞಾನ ವಿಭಾಗದಜಿಷ್ಣು ಬೆಸ್ಟ್‍ರೈಡರ್‍ಪ್ರಶಸ್ತಿಯನ್ನು ಪಡೆದುಕೊಂಡರು. 


ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ದು, ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top