ಸಂಸದ ದೊಡ್ಮನಿ, ದೊಡ್ಡವರು ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ
ಅತಿವೃಷ್ಟಿ ಘೋಷಣೆಗೆ ಜಾಧವ್ ಒತ್ತಾಯ | ರೈತರಿಗೆ ತಕ್ಷಣ ಪರಿಹಾರ ಒದಗಿಸಿ
ಕಲಬುರಗಿ: ಮಹಾರಾಷ್ಟ್ರದ ಉಜನಿ, ವೀರ, ಸೀನಾ ಜಲಾಶಯದಿಂದ 3.50 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಭೀಮಾ ನದಿ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಸೃಷ್ಟಿಯಾಗಿ ನೂರಾರು ಮನೆಗಳಿಗೆ ಹಾಗೂ ಜಾಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಶನಿವಾರದಂದು ಪ್ರವಾಹ ಪೀಡಿತ ದೇವಲ ಗಾಣಗಾಪುರ, ಸೊನ್ನ ಬ್ಯಾರೇಜ್ ಗೆ ಲೋಕಸಭಾ ಮಾಜಿ ಸಂಸದ ಡಾ. ಉಮೇಶ ಜಾಧವ್ ಭೇಟಿ ನೀಡಿ, ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.
ಬಳಿಕ ಅಫಜಲಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಹ ಮತ್ತು ನಿರಂತರವಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ಮನೆಗಳು, ಶಾಲಾಕಾಲೇಜುಗಳು, ಧಾರ್ಮಿಕ ಕ್ಷೇತ್ರಗಳು ಮುಳುಗಿವೆ. ಆದರೆ ಸರ್ಕಾರ ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರಿಗೆ ಇಲ್ಲಿವರೆಗೂ ಯಾವುದೇ ಪರಿಹಾರ ವಿತರಣೆ ಮಾಡಿಲ್ಲ, ಅಲ್ಲದೇ ಸರ್ಕಾರ ಪ್ರವಾಹ ನಿರ್ವಹಣೆಗೆ ಪರಿಹಾರ ಬಿಡುಗಡೆ ಮಾಡಿಲ್ಲ. ಈ ಕೂಡಲೇ ಅತಿವೃಷ್ಟಿ ಎಂದು ಘೋಷಣೆ ಮಾಡಿ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾಟಾಚಾರಕ್ಕೆ ಬಂದು ಪ್ರವಾಹ ಪೀಡಿತಗಳಿಗೆ ಬಂದು ಹೋಗಿದ್ದಾರೆ ಅಷ್ಟೇ. ಆದರೆ ಯಾವುದೇ ಜನಸಾಮಾನ್ಯರಿಗೆ ಸ್ಪಂದಿಸಬೇಕು ಕೆಲಸ ಮಾಡಿಲ್ಲ, ಮಹಾರಾಷ್ಟ್ರದಿಂದ ಭೀಮಾ ನದಿಗೆ ಬರುವ ನೀರಿನ ಪ್ರಮಾಣ ನಿಖರವಾಗಿ ಮಾಹಿತಿ ನೀಡಬೇಕು. ಮುಖ್ಯಮಂತ್ರಿ ಪರಿಹಾರ ನಿಧಿ, ಜಿಲ್ಲಾ ಉಸ್ತುವಾರಿ ಸಚಿವರ ನಿಧಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು, ಬೆಳೆ ಪರಿಹಾರ, ಬೆಳೆ ವಿಮೆ ಬಿಡುಗಡೆ, ರೈತರ ಸಾಲ ಮನ್ನಾ, ಕುಸಿದು ಮನೆಗಳಿಗೆ ನಿರ್ಮಾಣ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಸಂಸದ ರಾಧಾಕೃಷ್ಣ ದೊಡ್ಮನಿಯವರು ಚುನಾವಣೆಯಲ್ಲಿ ಗೆದ್ದು ಹೋದ ಬಳಿಕ ಇಲ್ಲಿವರೆಗೂ ದಿಶಾ ಸಭೆ ನಡೆಸಿಲ್ಲ, ಪ್ರವಾಹ ಬಂದರೂ ಭೇಟಿಕೊಟ್ಟು ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡಿಲ್ಲ, ನೂರೆಂಟು ಸುಳ್ಳು ಹೇಳಿ ಚುನಾವಣೆಯಲ್ಲಿ ಗೆದ್ದಿರುವ ಇವರಿಗೆ ಜನರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲ, ಸಂಸದ ದೊಡ್ಮನಿಯವರು ದೊಡ್ಡವರು ಇದ್ದಾರೆ.
-ಡಾ.ಉಮೇಶ ಜಾಧವ್ ಮಾಜಿ, ಲೋಕಸಭಾ ಸದಸ್ಯರು ಕಲಬುರಗಿ.
ಈ ಸಂದರ್ಭದಲ್ಲಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್,ಬಿಜೆಪಿ ಕಲಬುರಗಿ ನಗರ ಅಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಅವ್ವಣ್ಣ ಮ್ಯಾಕೇರಿ, ಮಲ್ಲಿಕಾರ್ಜುನ ಲಿಂಗದಳ್ಳಿ, ವಿಜಯಕುಮಾರ ದೇಸಾಯಿ, ಸುನೀಲ್ ಶೆಟ್ಟಿ, ಧಾನು ಪತಾಟೆ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ