ಕಲಾಕುಂಚದಿಂದ ದಸರಾ ಪ್ರಯುಕ್ತ ಉಚಿತ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

Upayuktha
0


ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಹಾಗೂ ಕಲಾಕುಂಚ ಮಹಿಳಾ ವಿಭಾಗದ ಸಂಯುಕ್ತಾಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ದಾವಣಗೆರೆಯ ಕಲಾಕುಂಚ  ಕಛೇರಿ ಸಭಾಂಗಣದಲ್ಲಿ ಅಕ್ಟೋಬರ್ 5 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಸಾರ್ವಜನಿಕವಾಗಿ ಆಟೋಟ ಸ್ಪರ್ಧೆ, ರಸರಂಜನೆ, ಪ್ರಶ್ನೋತ್ತರ ವಿವಿಧ ಸ್ಪರ್ಧೆಗಳನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ.


ದಿನಾಂಕ 30-9-2025ರೊಳಗೆ ಈ ಕೆಳಗಿನ ವ್ಯಾಟ್ಸಪ್ ಸಂಖ್ಯೆಗೆ ಹೆಸರು ನೊಂದಾಯಿಸಬೇಕೆಂದು ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಪ್ರಕಟಿಸಿದ್ದಾರೆ. ಅವಕಾಶ ವಂಚಿತರಾದ ಪ್ರತಿಭಾವಂತ ಪ್ರತಿಭೆಗಳನ್ನು ಅನಾವರಣಗೊಳಿಸಲು ಮುಕ್ತವಾದ ವೇದಿಕೆಯನ್ನು ಕಲ್ಪಿಸುವ ಸದುದ್ದೇಶದಿಂದ ಈ ಸಮಾರಂಭ ಮಾಡಲಾಗಿದ್ದು ದಾವಣಗೆರೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪ್ರತಿಭಾವಂತರು ಹೆಸರು ನೊಂದಾಯಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ. ಹೆಸರು ನೊಂದಾಯಿಸುವ ವ್ಯಾಟ್ಸಪ್ ಸಂಖ್ಯೆ : 9945785170, 9743897578.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top