ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು, ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಾದ ಅಭಿಲಾಶ್ ಡಿ. ಅಲ್ಮೇಡಾ, ಅಗ್ರಜ್ ಸಿ. ಗೌಡ, ದಕ್ಷ ಎ. ಶೆಟ್ಟಿ, ಪ್ರಣೀತ್ ಎಸ್., ಪ್ರೀತಮ್ ಪಿ., ಶಿವ ಪಟೇಲ್ ಹೆಚ್.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
