ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನಶಿಪ್: ಆಳ್ವಾಸ್ ಚಾಂಪಿಯನ್ಸ್

Upayuktha
0


ಮೂಡುಬಿದಿರೆ: ಕರ್ನಾಟಕ  ವಾಲಿಬಾಲ್  ಸಂಸ್ಥೆ   ಆಯೊಜಿಸಿದ್ದ  ಲೋಕೆಶ್ ಗೌಡ  ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ  ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ  ಪುರುಷರ ವಿಭಾಗದಲ್ಲಿ  ಪ್ರಶಸ್ತಿ  ಗೆದ್ದುಕೊಂಡಿತು.


ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ  ವಿಭಾಗದ  ಫೈನಲ್‌ನಲ್ಲಿ ಆಳ್ವಾಸ್ ತಂಡ 3-1   ಅಂತರದಿಂದ ಕರ್ನಾಟಕ  ರಾಜ್ಯ ಪೋಲಿಸ್ ತಂಡವನ್ನು  ಮಣಿಸಿತು. ತೀವ್ರ  ಪೈಪೋಟಿಯಿಂದ ಕೂಡಿದ್ದ  ಪಂದ್ಯದಲ್ಲಿ ಮೇಲುಗೈ ಸಾಧಿಸಿದ  ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು.  ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ  ತಂಡವನ್ನು  3-1 ಅಂತರದಿಂದ ಪರಭವಗೊಳಿಸಿತ್ತು.  ವಿಜೇತರಿಗೆ  ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ  ಅಭಿನಂದಿಸಿದ್ದಾರೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top