ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ಬುಧವಾರ ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು.
ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM) ಮತ್ತು ರಾಜ್ಯ ಸರ್ಕಾರದ ಬಸವ ವಸತಿ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದು ಅವುಗಳ ಅನುಷ್ಠಾನ ಕುರಿತು ಮಾರ್ಗದರ್ಶನ ನೀಡಿದರು.
ಇದಲ್ಲದೆ, ಏಕ ನಿವೇಶನ ವಿನ್ಯಾಸ ಅನುಮೋದನೆ, ಕಟ್ಟಡ ನಕ್ಷೆ ಅನುಮೋದನೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳಲ್ಲಿ ಎದುರಾಗುತ್ತಿರುವ ಅಡಚಣೆಗಳು ಸೇರಿದಂತೆ ಸ್ಥಳೀಯ ಆಡಳಿತ ಸಂಬಂಧಿತ ವಿಷಯಗಳ ಕುರಿತು ಚರ್ಚಿಸಲಾಯಿತು.
ನಾರಾವಿ ಗ್ರಾಮ ಪಂಚಾಯತಿಯು ಸ್ವಂತ ಆದಾಯ ಹೆಚ್ಚಿಸಲು ಕೈಗೊಂಡ ಕ್ರಮಗಳು, ಉತ್ತಮ ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಆಡಳಿತ ಮಂಡಳಿಯ ತೊಡಗಿಸಿಕೊಳ್ಳುವಿಕೆಯ ಕಾರ್ಯವೈಖರಿ ಬಗ್ಗೆ ಶಾಸಕರು ಸಂತೋಷ ವ್ಯಕ್ತಪಡಿಸಿ ಪ್ರಶಂಸಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ