ಮಜೂರು: ಗ್ರಾಮ ಪಂಚಾಯತ್ ಗೆ ದಿನಾಂಕ 17.09.2025 ರಂದು ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇವರು ಗ್ರಾಮ ಪಂಚಾಯತ್ ಗೆ ಭೇಟಿ ಕಾರ್ಯಕ್ರಮ ನಡೆಸಿದರು. ಮಜೂರು ಗ್ರಾಮ ಪಂಚಾಯತದ ಮಹಾತ್ಮಾಗಾಂಧಿ ನರೇಗಾ ಯೋಜನೆ, 15 ನೇ ಹಣಕಾಸು ಅನುದಾನ, ಅಂಬೇಡ್ಕರ್ ಯೋಜನೆ, ಬಸವ ವಸತಿ ಯೋಜನೆ, ಪ್ರಧಾನ್ ಮಂತ್ರಿ ಆವಾಜ್ ಯೋಜನೆ, ನಿವೇಶನ ಯೋಜನೆ, ಸ್ವಚ್ಚ ಬಾರತ್ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣ, ತ್ಯಾಜ್ಯ ಸಂಗ್ರಹಣೆ, ಜಲ ಜೀವನ್ ಮಿಷನ್ ಯೋಜನೆ , ತೆರಿಗೆ ವಸೂಲಾತಿ ಹಾಗೂ ಇತರೆ ವಿಷಯಗಳ ಪ್ರಗತಿ ಪರಿಶೀಲನೆ ಮಾಡಿ ಚರ್ಚಿಸಿದರು.
ಗ್ರಾಮ ಪಂಚಾಯತ್ ವೆಬ್ ಸೈಟ್ ರಾಜ್ಯ ದಲ್ಲಿಯೇ ಪ್ರಥಮವಾಗಿರಬಹುದು ಎಂದು ತಿಳಿಸಿದರು. ವೆಬ್ ಸೈಟ್ ಪರಿಶೀಲಿಸಲು ದತ್ತಾಂಶ ಸಂಗ್ರಹ ಸಾರ್ವಜನಿಕರಿಗೆ ಸರಕಾರಿ ಸೌಲಭ್ಯ ಇನ್ನಿತರ ವಿಚಾರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸುವ ವ್ಯವಸ್ಥೆ ವಿನೂತನವಾಗಿದ್ದು ಹಾಗೂ ISO ಪ್ರಮಾಣೀಕರಣ ಮಜೂರು ಗ್ರಾಮ ಪಂಚಾಯತ್ ಆಯ್ಕೆಯಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಇನ್ನೂ ಹೆಚ್ಚಿನ ಗುಣಮಟ್ಟ ಕಾಯ್ದುಕೊಳ್ಳಲು ಸಲಹೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಲದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿಲಾಸಿನಿ, ಗ್ರಾ.ಪಂ ಸದಸ್ಯರು, ಗ್ರಾಮ ಕರಣಿಕರಾದ ಕ್ಲಾರೆನ್ಸ್ ಲೆಸ್ಟರ್ನ್ ಕರ್ನೆಲಿಯೋ, ಅಂಗನವಾಡಿ ಮೇಲ್ವಿಚಾರಕರಾದ ಪೂರ್ಣಿಮಾ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಯಶೋದ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಕು.ಪೂಜಾ ಮತ್ತು ಕು ರಮ್ಯಾ, ಅಂಗನವಾಡಿ ಕಾರ್ಯಕರ್ತಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಪಂಚಾಯತ್ ಸಿಬಂದಿಗಳು ಉಪಸ್ಥಿತರಿದ್ದರು.
ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು..ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇವರು ಗ್ರಾಮ ಪಂಚಾಯತ್ ನ ಅಭಿವೃದ್ದಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಪಂಚಾಯತ್ ಕಾರ್ಯದರ್ಶಿ ಪ್ರಸಾದ್ ಭಂಡಾರಿಯವರು ಸ್ವಾಗತಿಸಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


