ಮಂಗಳೂರು: ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ( ನಿ) ಮಂಗಳೂರು ಇದರ ವಾರ್ಷಿಕ ಮಹಾ ಸಭೆ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನ ದಲ್ಲಿ ಶನಿವಾರ ನಡೆಯಿತು.
ಸಂಘದ ನಿರ್ದೇಶಕ ಪುಷ್ಪರಾಜ್ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಇಬ್ರಾಹಿಂ ಅಡ್ಕಸ್ಥಳ ಲೆಕ್ಕಪತ್ರ ಮಂಡಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ವಂದಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಪಾಂಡುರಂಗ ಆಚಾರ್ಯ ಉಪಸ್ಥಿತರಿದ್ದರು.
ಪತ್ರಕರ್ತರಿಗೆ ನಿವೇಶನ ಒದಗಿಸುವ ದ್ರಷ್ಟಿಯಿಂದ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಹಾಗೂ ಸರಕಾರಿ ಕಂದಾಯ ಭೂಮಿಯನ್ನು ಖರೀದಿಸಿ ಸಂಘದ ಸದಸ್ಯರಿಗೆ ನಿವೇಶನ ಒದಗಿಸಲು ಪ್ರಯತ್ನಿಸಲಾಗುವುದು ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು. ಇದೇ ವೇಳೆ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್ ಪಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


