ಮಂಗಳೂರು: ಹಿಂದಿ ದಿನವು ಕೇವಲ ಭಾಷೆಯ ಹಬ್ಬವಲ್ಲ ಇದು ದೇಶದ ಏಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಗುರುತಿನ ಸಂಕೇತವಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಕೆನರಾ ಕಾಲೇಜಿನ ಪ್ರಾಧ್ಯಾಪಕಿ ಸುಜಾತಾ. ಜಿ. ನಾಯಕ್ ನುಡಿದರು. ಅವರು ಹಿಂದೂ ವಿದ್ಯಾದಾಯಿನಿ ಸಂಘದ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಹಿಂದಿ ವಿಭಾಗವು ಆಚರಿಸಿದ ರಾಷ್ಟ್ರೀಯ ಹಿಂದಿ ದಿವಸ್ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಹರೀಶ್ ಆಚಾರ್ಯ ಪಿ. ಇವರು ಹಿಂದಿ ದಿನವು ಯುವ ಪೀಳಿಗೆಯನ್ನು ಹಿಂದಿ ಭಾಷೆಯ ಸಂರಕ್ಷಣೆ, ಅಭಿವೃದ್ಧಿ, ಮತ್ತು ಸಾಹಿತ್ಯ, ಶಿಕ್ಷಣ ಮತ್ತು ಮಾಧ್ಯಮಗಳಲ್ಲಿ ಸೃಜನಾತ್ಮಕ ವಿಸ್ತರಣೆಗೆ ಕೊಡುಗೆ ನೀಡಲು ಪ್ರೇರೇಪಿಸುತ್ತದೆ ಎಂದು ನುಡಿದರು. ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಪ್ರೊl ನೀಲಪ್ಪ. ವಿ, ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಜ್ಯೋತಿ ಎಸ್ ಕಾಮತ್ ಸ್ವಾಗತಿಸಿ ಹಿಂದಿ ಪ್ರಾಧ್ಯಾಪಕಿ ರಮಿತ ವಂದಿಸಿದರು.ಕಲಾ ವಿಭಾಗದ ವಿದ್ಯಾರ್ಥಿನಿ ತೇಜಸ್ವಿ ಕರ್ಕೇರ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


