ಮಂಗಳೂರು: ನಮ್ಮ ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ವನಿತೆ ಉಳ್ಳಾಲದ ರಾಣಿ ಅಬ್ಬಕ್ಕಳ ಯಶೋಗಾಥೆ ನಮಗೆಲ್ಲರಿಗೂ ಅನುಕರಣೀಯವಾಗಿದೆ. ತುಳುನಾಡಿನ ಕರಾವಳಿಯ ರಕ್ಷಣಾ ವ್ಯವಸ್ಥೆಯನ್ನು ಸಂವರ್ಧಿಸುವಲ್ಲಿ ರಾಣಿ ಅಬ್ಬಕ್ಕಳ ಪಾತ್ರ ಮಹತ್ತರವಾದುದು. ಇಂದಿನ ಯುವಜನತೆಗೆ ಆಕೆಯ ಧೈರ್ಯ, ಸ್ವಾಭಿಮಾನ, ದೇಶಾಭಿಮಾನ ಮಾದರಿಯಾಗಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪಿ ಬಿ ಹರೀಶ್ ರೈ ತಿಳಿಸಿದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ನಗರದ ಡಾ.ಎನ್ಎಸ್ಎಎಂ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ ಅಬ್ಬಕ್ಕಳ 500ನೇ ಜನ್ಮವರ್ಷಾಚರಣೆಯ ಅಂಗವಾಗಿ ನಡೆದ ಉಪನ್ಯಾಸ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ರಾಮಚಂದ್ರ ಮಾತನಾಡಿ, ಉಳ್ಳಾಲದ ರಾಣಿ ಅಬ್ಬಕ್ಕ ಹೆಣ್ಣಿನ ಅಗಾಧ ಶಕ್ತಿಯ ಸಂಕೇತ. ಹೆಣ್ಣು ಧೀರೆಯಾಗಿರಬೇಕು, ಅನ್ಯಾಯದ ವಿರುದ್ಧ ಹೋರಾಡಬೇಕು. ಈ ನಿಟ್ಟಿನಲ್ಲಿ ಅಬ್ಬಕ್ಕ ಪ್ರತಿಯೊಂದು ಹೆಣ್ಣಿಗೂ ಆದರ್ಶವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಶೆಟ್ಟಿ ಕೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಅನ್ನಪೂರ್ಣ ನಾಯಕ್ ಕೆ ಆರ್ ಎಂ ಎಸ್ ಎಸ್ ವಿಭಾಗ ಕಾರ್ಯದರ್ಶಿ ರಾಜೇಶ್ ಕುಮಾರ್, ಕೆಆರ್‌ಎಂಎಸ್‌ಎಸ್ ನ ಮಮತಾ ಶೆಟ್ಟಿ, ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಸಂತೋಷ್ ಎ ಶೆಟ್ಟಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
