ಮಂಗಳೂರು ವಿವಿ: ಸರಣಿ ಉಪನ್ಯಾಸ ಕಾರ್ಯಕ್ರಮಕ್ಕೆ ನೋಂದಣಿ

Upayuktha
0


ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯು ಕನ್ನಡ ಭಾಷೆ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲಪಿಸುವ ಉದ್ದೇಶದಿಂದ 'ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ' ಎಂಬ ಶೀರ್ಷಿಕೆಯಡಿ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿದೆ.


ಮಂಗಳೂರಿನ  ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಅಕ್ಟೋಬರ್ ತಿಂಗಳ 13, 14 ಮತ್ತು 15 ರಂದು ಪ್ರತಿದಿನ ಸಂಜೆ 5.30 ರಿಂದ 7 ಗಂಟೆಯವರೆಗೆ ಈ ಸರಣಿಯ ಮೊದಲ ಮೂರು ಉಪನ್ಯಾಸಗಳು ನಡೆಯಲಿವೆ. ಪಂಪ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಬಿ.ಎ ವಿವೇಕ ರೈ ಇವರು ಪಂಪನ ಕಾವ್ಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಈ ಉಪನ್ಯಾಸಕ್ಕೆ‌ ಭಾಗವಹಿಸಲು ಆಸಕ್ತರಾದವರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳ ಬಹುದಾಗಿದೆ. 


ಕನ್ನಡ ಐಚ್ಛಿಕ ವಿದ್ಯಾರ್ಥಿಗಳು ಮತ್ತು ಕನ್ನಡ‌ ಅಧ್ಯಾಪಕರನ್ನು ಹೊರತುಪಡಿಸಿದವರಿಗೆ ಆದ್ಯತೆ ನೀಡಲಾಗುವುದು. ಹೆಸರನ್ನು ನೋಂದಾಯಿಸಿಕೊಂಡು ಮೂರು ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ವಿವಿ ವತಿಯಿಂದ ಪ್ರಮಾಣಪತ್ರ ನೀಡಲಾಗುವುದು. ಆಸಕ್ತರು ಸೆಪ್ಟಂಬರ್ 30 ರೊಳಗೆ ತಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ ಹಾಗೂ ಸಂಪರ್ಕ ಸಂಖ್ಯೆಯನ್ನು ನೀಡಿ ಈ ಕೆಳಗಿನ ಮೊಬೈಲ್‌ 8904628052, 8310300875 ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಹಾಗೂ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ನಾಗಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top