ಬಿ.ಸಿ ರೋಡ್‌ನಲ್ಲಿ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Upayuktha
0


ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆ, ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಗುರು ಜಯಂತಿ ಆಚರಣೆ ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು.

     

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ,ಸಂಘರ್ಷವಿಲ್ಲದೆ ಸಾಮಾಜಿಕ ನ್ಯಾಯವನ್ನು ಒದಗಿಸಿ, ಸರ್ವರಿಗೂ ಸಹಬಾಳ್ವೆ ನಡೆಸಲು ಅನುಕೂಲ ಕಲ್ಪಿಸಿದ ಮಹಾನ್ ಸಂತ ಬ್ರಹ್ಮ ಶ್ರೀ ನಾರಾಯಣ ಗುರುಗಳು, ಕೇವಲ ಬಲ್ಲವರ ಗುರುಗಳು ಅಲ್ಲ, ಸಮಸ್ತ ಮಾನವ ಕುಲಕ್ಕೆ ಗುರುಗಳಾಗಿದ್ದಾರೆ ಎಂದು ಅವರು ಹೇಳಿದರು.

 

ಪುಂಜಾಲಕಟ್ಟೆ ವಸತಿ ಶಾಲೆಯಲ್ಲಿ ಧ್ಯಾನ ಮಂದಿರ ನಿರ್ಮಾಣದ  ಕನಸು ನನ್ನದಾಗಿದ್ದು,ಈ ಅವಧಿಯಲ್ಲೆ ಮಾಡಿಯೇ ಸಿದ್ದ ಎಂದು ಭರವಸೆ ನೀಡಿದರು. ನಾರಾಯಣ ಗುರು ವಸತಿ ಶಾಲೆಯ ಮಕ್ಕಳ ಜೊತೆ ನಾನು ನನ್ನ ಹುಟ್ಟು ಹಬ್ವವನ್ನು ಆಚರಿಸಿದ್ದೇನೆ. ಅ ದಿನ ನನಗೆ ಅತ್ಯಂತ ಖುಷಿ ತಂದ ದಿನ ಎಂದು ಹೇಳಿದರು.

 

ಪುರಸಭಾ ಅಧ್ಯಕ್ಷ ವಾಸುಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಅಧ್ಯಕ್ಷ ನಾಗೇಶ್ ಪೂಜಾರಿ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ರಾಗಿಣಿ ಮಾಧವ ಚೆಂಡ್ತಿಮಾರ್ ಪುಂಜಾಲಕಟ್ಟೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.  ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top