ನಮ್ಮನ್ನು ನಾವು ತಿದ್ದಿಕೊಳ್ಳಲು ಜಪ ಯಜ್ಞ ಪ್ರೇರಣೆಯಾಗಲಿ: ಕಶೆಕೋಡಿ ಸೂರ್ಯನಾರಾಯಣ ಭಟ್
ಬಂಟ್ವಾಳ: ನಾವು ಜೀವನ ಮಾಡಿದ ರೀತಿ ತಪ್ಪಿದರಿಂದ ನಮ್ಮ ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ನಾವು ಎಡವಿದ್ದೇವೆ, ಮೊದಲು ನಾವು ಬದಲಾವಣೆಯಾಗಿ ನಮ್ಮ ಮಕ್ಕಳಿಗೆ ನಾವೇ ಆದರ್ಶವಾಗೋಣ, ಶ್ರೀ ರಾಮ ನಮ್ಮ ಜೀವನಕ್ಕೆ ಬಹುದೊಡ್ಡ ಪಾಠ, ಸಮಾಜದ ಸ್ವಾಸ್ತ್ಯ ಕಾಪಾಡಲು ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರೀರಾಮ ತಾರಕ ಜಪ ಯಜ್ಞ ಅಗತ್ಯ, ನಮ್ಮನ್ನು ನಾವು ತಿದ್ದಿಕೊಳ್ಳಲು ಶ್ರೀ ರಾಮನಾಮ ತಾರಕ ಜಪ ಯಜ್ಞ ಪ್ರೇರಣೆಯಾಗಲಿ ಎಂದು ರಾಜ್ಯ ಧಾರ್ಮಿಕ ಪರಿಷತ್ ನಿಕಟಪೂರ್ವ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.
ಅವರು ನೆತ್ತರಕೆರೆಯಲ್ಲಿ ಆ. 31ರಂದು ನಡೆದ ಶ್ರೀರಾಮ ತಾರಕ ಜಪ ಯಜ್ಞದ ಸಮಾಲೋಚನಾ ಸಭೆಯಲ್ಲಿ ಪ್ರಧಾನ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಾಧಾ ಸುರಭಿ ಗೋ ಮಂದಿರದ ಭಕ್ತಿಭೂಷಣ್ ದಾಸ್ ಪ್ರಭುಜೀ, ಬೃಂದಾವನದ ಬ್ರಿಜೇಶ್ ಗೊಸ್ವಾಮಿ, ಕಳ್ಳಿಗೆ ಶ್ರೀ ಲಕ್ಷೀವಿಷ್ಣುಮೂರ್ತಿ ದೇವಸ್ಥಾದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪಂಬದಬೆಟ್ಟು, ಫರಂಗಿಪೇಟೆ ಶ್ರೀ ವೀರಾಂಜನೇಯ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ಗಾಂಭೀರ ಉಪಸ್ಥಿತರಿದ್ದರು.
ಸಂಸ್ಕಾರ ಭಾರತೀ ಜಿಲ್ಲಾಧ್ಯಕ್ಷ ತಾರಾನಾಥ ಕೊಟ್ಟಾರಿ ತೇವು ಶ್ರೀ ರಾಮ ಜಪ ಯಜ್ಞದ ಬಗ್ಗೆ ಮಾಹಿತಿ ನೀಡಿ ಸಮಿತಿ ರಚನೆಯ ಪ್ರಕ್ರಿಯೆ ನಡೆಸಿಕೊಟ್ಟರು,ಸಂಸ್ಕಾರ ಭಾರತೀ ಜಿಲ್ಲಾ ಉಪಾಧ್ಯಕ್ಷ ಅನಿಲ್ ಪಂಡಿತ್ ಸ್ವಾಗತಿಸಿ, ಸಂಘಟಕ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ:
ಈ ಸಂದರ್ಭದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ದೇವದಾಸ್ ಕೆ ಆರ್ ಕೊಡ್ಮಾಣ್, ಕಾರ್ಯದರ್ಶಿ ಬಿನುತ್ ಕುಮಾರ್ ಅಬ್ಬೆಟ್ಟು, ಕೋಶಾಧಿಕಾರಿ ಕಿಶೋರ್ ಕುಮಾರ್ ನಿಸರ್ಗ ಹಾಗೂ ಇತರ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


