ಕೃತಕ ಬುದ್ಧಿಮತ್ತೆಯಿಂದ ಹೊಸ ಉದ್ಯೋಗಾವಕಾಶಗಳು: ಪ್ರೊ.ಜಿ.ಎಸ್. ತ್ಯಾಗರಾಜು

Upayuktha
0

ಎಸ್.ಡಿ.ಎಂ ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್‍ಗೆ ಚಾಲನೆ



ಉಜಿರೆ: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗವಕಾಶ ಕಡಿಮೆಯಾಗುತ್ತಿಲ್ಲ.  ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಜಿ.ಎಸ್. ತ್ಯಾಗರಾಜು ಹೇಳಿದರು.


ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗದ ‘ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್’ನ ಕಾರ್ಯಚಟುವಟಿಕೆಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ದಿ ರೋಲ್ ಆಫ್ ಸ್ಟ್ಯಾಟಿಸ್ಟಿಕ್ಸ್ ಇನ್ ಬಿಲ್ಡಿಂಗ್ ರಿಲಯೇಬಲ್ ಎಐ ಸಿಸ್ಟಮ್’ ಕುರಿತು ವಿಶೇಷ ಉಪನ್ಯಾಸ ನೀಡಿದರು. 


ಕೃತಕ ಬುದ್ಧಿಮತ್ತೆಗೆ ಪೂರಕವಾದ ಹೊಸ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕಂಪ್ಯೂಟರ್ ಆವಿಪ್ಕಾರವಾದಾಗ ಹಲವರು ಉದ್ಯೋಗವಕಾಶಗಳನ್ನು ಕಳೆದುಕೊಂಡರು. ಮುಂದೆ ಅದರೊಂದಿಗೆಯೇ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಹೊಸ ಬಗೆಯ ಉದ್ಯೋಗಳನ್ನು ಸೃಷ್ಟಿಸಿಕೊಂಡರು. ಅದರಂತೆಯೇ ಆರ್ಟಿಫಿಷಿಯಲ್ ಇಂಟಲಿಜೆನ್ಸ್‌ನ ಹೊಸ ಕೌಶಲ್ಯಗಳೊಂದಿಗೆ ಮುಂದುವರಿಯಬೇಕಾಗಿದೆ ಎಂದರು.


ಎಐ ಈಗ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕತೆ. ಸಂಖ್ಯಾಶಾಸ್ತ್ರದ ಸಾಧ್ಯತೆಗಳನ್ನು ಎಐ ವಿಸ್ತರಿಸಬಲ್ಲದು. ಸಂಖ್ಯಾಶಾಸ್ತ್ರ ವಲಯದಲ್ಲಿ ನೂತನ ಆವಿಷ್ಕಾರಗಳನ್ನು ರೂಪಿಸುವುದಕ್ಕೆ ಎಐ ತಂತ್ರಜ್ಞಾನವನ್ನು ಪೂರಕವಾಗಿಸಿಕೊಳ್ಳಬೇಕು. ಎಲ್ಲಾ ವಿಷಯಗಳಲ್ಲಿಯೂ ನಿಖರತೆ ಅವಶ್ಯಕ. ಈ ನಿಖರತೆಗೆ ಸಂಖ್ಯಾಶಾಸ್ತ್ರದ ಅಗತ್ಯವಿದೆ. ಈ ನಿಖರತೆಯ ಸ್ವರೂಪವನ್ನು ಇನ್ನಷ್ಟು ಅಧಿಕೃತಗೊಳಿಸುವುದಕ್ಕೆ ಎಐ ತಂತ್ರಜ್ಞಾನ ನೆರವಾಗುತ್ತದೆ ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಸೌಮ್ಯ ಬಿ.ಪಿ ಮಾತನಾಡಿದರು. ಸರಕಾರವು ಹೊಸ ನೀತಿ ನಿಯಮಗಳನ್ನು ಅಭಿವೃದ್ಧಿಪಡಿಸುವಾಗ ಸಾಂಖ್ಯಿಕ ಮಾಹಿತಿಯನ್ನೇ ಅವಲಂಬಿಸಿರುತ್ತದೆ. ಉದ್ಯಮ ವಲಯ ಮತ್ತು ವ್ಯವಹಾರಗಳಲ್ಲಿಯೂ ಕೂಡ ಸಂಖ್ಯಾಶಾಸ್ತ್ರವೇ ಮುಖ್ಯ ಪಾತ್ರ ವಹಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಇದರ ಕಡೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಕುಮಾರಿ ಉಪಸ್ಥಿತರಿದ್ದರು. ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಪ್ರಕೃತಿ ಟಿ.ಪಿ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top