ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿನಿ ಸ್ಮೃತಿ ಕೆ ಶೆಟ್ಟಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ