ಶಿಲಾನ್ಯಾಸ ಸಮಾರಂಭ, ಕಾರ್ಯಕರ್ತರ ಸಮಾವೇಶ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ 'ಭೂಮಿ ಪೂಜೆ', 'ಶಿಲಾನ್ಯಾಸ' ಸಮಾರಂಭ ಮತ್ತು 'ಕಾರ್ಯಕರ್ತರ ಸಮಾವೇಶ'ವು ಅ.3 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.
ಈ ಎರಡೂ ಕಾರ್ಯಕ್ರಮಗಳಲ್ಲಿ ಪಕ್ಷದ ಹಿರಿಯರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಅಗತ್ಯವಾಗಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ