ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ, ಓಣಂ ಆಚರಣೆ

Chandrashekhara Kulamarva
0


ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಶುಕ್ರವಾರ ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಶುಭ ಹಾರೈಸಿ ಆಶೀರ್ವದಿಸಿದರು. ಭವಿಷ್ ಘಟಕದ ಪ್ರಾಂತ ಸಂಯೋಜಕ ಗಣಪತಿ ಹೆಗ್ಡೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದರು.


ಪುತ್ತೂರು ನರೇಂದ್ರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಹಾಗೂ ಯಕ್ಷಗಾನ ಕಲಾವಿದೆ ಶ್ರೀಮತಿ ಮಧುರಾ ಗಣರಾಜ್ ಭಟ್ ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ನೆರವೇರಿಸಿದರು. ಭವಿಷ್ಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಂಸ್ಕೃತಿಕ ಚಟುವಟಿಕೆ, ನಾಯಕತ್ವ, ವಾಕ್ಚಾತುರ್ಯದ ಮೂಲಕ ತಯಾರಿ ನಡೆಸಬೇಕು ಎಂದರು. 


ಓಣಂ ಹಬ್ಬದ ಪ್ರಯುಕ್ತ ಪೂಕಳಂ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭವಿಷ್ ಘಟಕದ ನಿರ್ದೇಶಕ ಶ್ರೀಮತಿ ಜಯಲಕ್ಷ್ಮಿ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳಾದ ದಿವ್ಯಲಕ್ಷ್ಮೀ ಸ್ವಾಗತಿಸಿ, ಅನ್ವಯ ನರಸಿಂಹ ವಂದಿಸಿ, ಧನುಶ್ರೀ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top