ರೋಹನ್ ಸಿಟಿಯಲ್ಲಿ ಓಣಂ ಸಂಭ್ರಮ

Upayuktha
0




ಬಿಜೈ, ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.


ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಡಿಯೋನ್ ಮೊಂತೆರೋ  ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ  ನೀಡಿದರು.


ಓಣಂ ಹಬ್ಬದ ಹೂವಿನ ಅಲಂಕಾರ (ಪೂಕಳಂ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರ್ದೇಶಕ ಡಿಯೋನ್ ಮೊಂತೆರೋ  “ಓಣಂ ಹಬ್ಬವು ಏಕತೆ ಸಂಕೇತ. ಇಂತಹ ಆಚರಣೆಗಳು ನಮ್ಮ ಬಾಂಧವ್ಯವನ್ನು ಬಲಪಡಿಸುತ್ತವೆ” ಎಂದು ಹೇಳಿದರು.


“ಎಲ್ಲರೂ ಒಗ್ಗಟ್ಟಿನಿಂದ ಒಂದು ಕುಟುಂಬದಂತೆ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷಕರ. ಇಂತಹ ಸಂದರ್ಭಗಳು ಪರಸ್ಪರ ಗೌರವ ಮತ್ತು ಸ್ನೇಹವನ್ನು ಹೆಚ್ಚಿಸುತ್ತವೆ” ಎಂದು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಹೇಳಿದರು.


ರೋಹನ್ ಕಾರ್ಪೋರೇಶನ್ ವತಿಯಿಂದ ಹಮ್ಮಿಕೊಂಡಿದ್ದ ಈ ಓಣಂ ಆಚರಣೆಯು ಕೇವಲ ಹಬ್ಬದ ಆಚರಣೆ ಮಾತ್ರವಲ್ಲದೆ, ಸಂಸ್ಥೆಯ ಏಕತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಪುನರುಚ್ಚರಿಸಿದ ಸಮಾರಂಭವೆನಿಸಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top