ಮಂಗಳೂರು: ಮಕ್ಕಳ ಆರೋಗ್ಯದ ಕುರಿತು ಪೋಷಕರು ಹೆಚ್ಚಿನ ಗಮನ ಹಾಗೂ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಶಾಲೆಯಲ್ಲಿ ನಡೆದ ಪೋಷಣಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೆಎಂಸಿ ಆಸ್ಪತ್ರೆಯ ಡಾ ಶರಾವತಿ ಹಾಗೂ ಡಾ. ಎಲ್ಸ್ ಷಾ ಮಾಹಿತಿ ನೀಡಿದರು. ಶಾಲಾ ಮುಖ್ಯ ಗುರು ಲೀನಾ, ಸಿಆರ್ಪಿ ವಿನೋದ ಅಮೀನ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸವಿತಾ, ಆರೋಗ್ಯ ಸಹಾಯಕಿಯರಾದ ಸುಮಿತ್ರಾ, ಭಾರತಿ, ಅಂಗನವಾಡಿ ಶಿಕ್ಷಕಿ ನಂದಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


