ದಾವಣಗೆರೆ: ಕವಿತ್ತ ಕರ್ಮಮಣಿ ಫೌಂಡೇಶನ್ (ರಿ), ನಾಗರಮುನ್ನೋಳಿ ವತಿಯಿಂದ 2024 - 25 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಲ್.ಎಚ್. ಪೆಂಡಾರಿ (ಕವಿತ್ತ ಕರ್ಮಮಣಿ) ತಿಳಿಸಿದ್ದಾರೆ.
ವಿದ್ಯಾಭ್ಯಾಸ ಹಂತದಲ್ಲೇ ಮಕ್ಕಳಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಭಾಷೆಗಳ ಅಭಿಮಾನ, ಕಾಳಜಿ, ಅರಿವು ಮೂಡಿಸುವ ಸದುದ್ದೇಶದಿಂದ ಹಮ್ಮಿಕೊಳ್ಳಲಾದ ಈ ಸಮಾರಂಭದಲ್ಲಿ ಕನ್ನಡ ಮತ್ತು ಹಿಂದಿ ಭಾಷೆಯ ಶಿಕ್ಷಕ, ಶಿಕ್ಷಕಿಯರಿಗೆ, ಉಪನ್ಯಾಸಕರಿಗೆ 'ತಾಯ್ನುಡಿ ಸೇವಾರತ್ನ', 'ರಾಷ್ಟ್ರಭಾಷಾ ಸೇವಾರತ್ನ' ಪ್ರಶಸ್ತಿಗಳನ್ನು ವಿತರಿಸಿ ಗೌರವಿಸಲಾಗುವುದು.
ಆಸಕ್ತ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು 14 ಸೆಪ್ಟೆಂಬರ್ 2025 ರೊಳಗೆ 9743867298 ಈ ಸಂಖ್ಯೆಗೆ ಸಂಪರ್ಕಿಸಿ ಅರ್ಜಿ ಸಲ್ಲಿಸ ಬಹುದೆಂದು ವೇದಿಕೆಯ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ