ಆಹಾರೋದ್ಯಮದಲ್ಲಿ ವಿಪುಲವಾದ ಅವಕಾಶಗಳು: ಗಿರೀಶ್ ಎಂ

Chandrashekhara Kulamarva
0


ಪುತ್ತೂರು:
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವತಿಯಿಂದ “ಫುಡ್ ಫೆಸ್ಟ್” ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಗಿರೀಶ್ ಎಂ, ಮಾಲೀಕರು, ಸಂತೃಪ್ತಿ ಹೋಟೆಲ್, ದರ್ಬೆ,ಪುತ್ತೂರು ಇವರು ಆಗಮಿಸಿದರು. 


ಕಾರ್ಯಕ್ರಮದ ಉದ್ಘಾಟನೆಯನ್ನು ವಿನೂತನ ರೀತಿಯಲ್ಲಿ ನೆರವೇರಿಸಿ ಮಾತನಾಡಿದ ಅವರು "ಕಲಿಕೆಯ ಜೊತೆಗೆ ಗಳಿಕೆ ಎಂಬ ಯೋಜನೆ ಇಂದಿನ ವಿದ್ಯಾರ್ಥಿಗಳಲ್ಲಿ ಬಂದರೆ ಅದಕ್ಕೆ ಪೂರಕವಾದ ಯೋಜನೆಗಳು ರೂಪುಗೊಳ್ಳುತ್ತವೆ. ಈ ರೀತಿ ಕಲಿಕೆ ಮತ್ತು ಗಳಿಕೆ ಜೊತೆಯಾಗಿ ಹೋದರೆ ದೇಶದ ಅಭಿವೃದ್ಧಿಯ ಕಡೆಗೆ ಒಂದು ಹೆಜ್ಜೆ ಇಟ್ಟಂತೆ. ವಿವಿಧ ರೀತಿಯ ಉದ್ಯಮ ಕ್ಷೇತ್ರಗಳಲ್ಲಿ ಆಹಾರೋದ್ಯಮಕ್ಕೆ ಎಂದಿಗೂ ಬೇಡಿಕೆ ಕಡಿಮೆಯಾಗುವುದಿಲ್ಲ. 


ಈ ಕ್ಷೇತ್ರದಲ್ಲಿಯೂ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಬಗೆಗೆ ಇಂದಿನ ಜನಾಂಗವು ಯೋಚಿಸಬೇಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಉಪಸ್ಥಿತರಿದ್ದು,  ಆಹಾರಮೇಳದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ದ್ವಿತೀಯ ವಾಣಿಜ್ಯ ವಿಭಾಗದ ಗೌರಿ ಸ್ವಾಗತಿಸಿ, ವೈಶಾಲಿ ವಂದಿಸಿದರು.  ದೀಪಕ್ ಗುಜಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top