ಅಂಬಿಕಾ ಸಿಬಿಎಸ್‌ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ

Upayuktha
0

ವಿಜ್ಞಾನ ಹಾಗೂ ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್ ಹಾಗೂ ಮಂದಿರಾ ಕಜೆ ಪ್ರಥಮ



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ  ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.


ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿ, ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿಗಳ ಪುತ್ರ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ, ಮಹೇಶ್ ಕಜೆ ಹಾಗೂ ದೀಪಿಕಾ ಕಜೆ ದಂಪತಿಯ ಪುತ್ರಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಇವರಿಬ್ಬರೂ ಮುಂದೆ ನಡೆಯುವ ಝೋನಲ್ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ಅಂತೆಯೇ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ, ಪ್ರವೀಣ್ ರಾವ್ ಮತ್ತು ಸುಗಂಧಿನಿ ದಂಪತಿ ಪುತ್ರ ಪ್ರಿಯಾಂಶು ರಾವ್, ಸುರೇಶ್ ಎಸ್ ಶೆಟ್ಟಿ ಮತ್ತು ನೈನಾ ದಂಪತಿ ಪುತ್ರ ಕನಿಷ್ಕ್ ಎನ್ ಶೆಟ್ಟಿ ಹಾಗೂ 9ನೇ ತರಗತಿ ವಿದ್ಯಾರ್ಥಿ, ಮಧುಸೂದನ್ ಸಾಲೆ ಮತ್ತು ವಿನುತಾ ಎಮ್ ಸಾಲೆ ದಂಪತಿ ಪುತ್ರ ಅನಿತೇಜ್ ಎಮ್ ಸಾಲೆ ಅವರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top