ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಸೋಮವಾರ ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ, ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೈದಿಕರಾದ ಅನಂತ ಭಟ್ ಉರ್ಲಾಂಡಿ ಹಾಗೂ ಸುಬ್ರಹ್ಮಣ್ಯ ಭಟ್ ವೀರಮಂಗಲ ಅವರು ಧಾಮಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ,  ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಎ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ. ಮತ್ತಿತರರು ಹಾಜರಿದ್ದರು. ಶ್ರೀ ಶಾರದಾ ಪೂಜೆಯ ತರುವಾಯ ಅಂಬಿಕಾ ಪರಿವಾರಕ್ಕೆ ಸೇರಿದ ಹಲವಾರು ವಾಹನಗಳಿಗೆ ಆಯುಧಪೂಜೆ ಪ್ರಯುಕ್ತ ವಾಹನಪೂಜೆ ನೆರವೇರಿತು.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top