ವಿದೇಶೀಯರೂ ನಮ್ಮಲ್ಲಿನ ಜ್ಞಾನವನ್ನು ಅವರು ಬಳಸುತ್ತಿರಬೇಕಾದರೆ ಭಾರತೀಯರಾದ ನಾವು ಈ ಶಾಸ್ತ್ರಗ್ರಂಥಗಳು, ಜ್ಞಾನ ಪರಂಪರೆ ಇತ್ಯಾದಿಗಳನ್ನು ಈ ನೆಲದಲ್ಲಿ ಉಳಿಸಬೇಕಾದದ್ದು ಅತ್ಯವಶ್ಯಕ ಎಂದು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ವೇದಾಂತ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಶ್ವನಾಥ ಹೆಗಡೆ ಸುಂಕಸಾಳ ನುಡಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ, ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ವಿಭಾಗ, ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆಯ ಮೂರನೆಯ ಹಾಗೂ ನಾಲ್ಕನೆಯ ಸರಣಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ ಭಾರತೀಯ ಜ್ಞಾನದಲ್ಲಿ ಸತ್ಯತೆ ಇದೆ. ಹೊರಗಿನ ಹೆಚ್ಚಿನ ವಿಷಯಗಳ ಬಗ್ಗೆ ತರಗತಿಯ ಅಧ್ಯಯನದಿಂದ ಕಲಿಯಬಹುದು. ಆದರೆ ನಮ್ಮೊಳಗಿನ ಆಂತರಿಕ ವಿಚಾರಗಳನ್ನು ನಮಗೆ ನಾವಾಗಿಯೇ ತಿಳಿಯಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯಕ್ ಶುಭಹಾರೈಸಿದರು.ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಶ ಕುಮಾರ ಎಂ ಹಾಗೂ ಸಂಸ್ಕೃತ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮುರಳಿ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಡಾ. ವಿಶ್ವನಾಥ್ ಹೆಗಡೆ ಸುಂಕಸಾಳ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಕೃತ ಸಂಘದ ಅಧ್ಯಕ್ಷೆ ಪ್ರಣತಿ.ಕೆ, ಕಾರ್ಯದರ್ಶಿ ಕೃತಿಕಾ ಕೆ.ವಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಕೃತ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮುರಳಿ ಕೃಷ್ಣ, ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಸ್ವಾಗತಿಸಿದರು. ಸಂಸ್ಕೃತ ಸಂಘದ ಜೊತೆ ಕಾರ್ಯದರ್ಶಿ ಅನರ್ಘ್ಯಾ.ಜಿ ವಂದಿಸಿದರು. ದಿಶಾ ಹಾಗೂ ಅನರ್ಘ್ಯಾ.ಜಿ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
