ಪುತ್ತೂರು: ಸಮೃದ್ಧ, ಶ್ರೀಮಂತ, ಸಾಂಸ್ಕೃತಿಕ ವೈಭವವನ್ನು ಹೊಂದಿರುವ ರಾಜ್ಯ ಕೇರಳ. ಓಣಂ ಕೇರಳದ ಒಂದು ಕೃಷಿ ಪ್ರಧಾನವಾದ ಹಬ್ಬವಾಗಿದೆ. ಕೃಷಿಯಲ್ಲಿ ಫಸಲು ಬಂದಾಗ ಅದನ್ನು ಮನೆಗೆ ತಂದು ಆಚರಿಸುವ ಹಬ್ಬ ಇದಾಗಿದೆ. ಈ ಪರ್ವವನ್ನು ಬಡವ ಬಲ್ಲಿದನೆಂಬ ತಾರತಮ್ಯವಿಲ್ಲದೆ ವಿಜೃಂಭಣೆಯಿಂದ ಸಂಭ್ರಮಿಸುತ್ತಾರೆ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ನಾಯಕ್ ಹೇಳಿದರು.
ಇವರು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ,ಮಾನವಶಾಸ್ತ್ರ ಸಂಘ, ಐಕ್ಯೂಎಸಿ ಹಾಗೂ ಮತ್ತಿತರ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಡೆದ ಓಣಂ ಉತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಆಯೋಜಿಸಿದ ಪೂಕಳಂ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಕೃಷ್ಣ ಗಣರಾಜ್ ಭಟ್ ಎಸ್, ಐಕ್ಯೂಎಸಿ ಸಂಯೋಜಕಿ ಡಾ. ರವಿಕಲಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ. ಎಸ್ ನಿರ್ವಹಿಸಿ ತೃತೀಯ ಕಲಾ ವಿಭಾಗದ ವಿದ್ಯಾರ್ಥಿ ಧನ್ಯಶ್ರೀ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


