ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ

Chandrashekhara Kulamarva
0



ಪುತ್ತೂರು: ಇಂದು ಶಿಕ್ಷಕರು ನೈಜ ಅರ್ಥದಲ್ಲಿ ಗುರುಗಳಾಗಬೇಕಾದ ಅವಶ್ಯಕತೆ ಇದೆ. ವಿದ್ಯಾರ್ಥಿಗಳಿಗೆ ಪಠ್ಯವನ್ನು ಉತ್ತಮ ರೀತಿಯಲ್ಲಿ ಹೇಳಿಕೊಡುವುದಷ್ಟೇ ಅಲ್ಲದೆ ಜೀವನ ಮೌಲ್ಯಗಳನ್ನು ಕೂಡ ತಿಳಿಸಿಕೊಡಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಹೇಳಿದರು.


ಅವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕ ದಿನಾಚರಣೆ ಆಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ,  ಇಂದಿನ ಆಧುನಿಕ ಯುಗದಲ್ಲಿ ಸ್ಮಾರ್ಟ್ ಬೋರ್ಡ್ ಮತ್ತು ಸ್ಮಾರ್ಟ್ ತರಗತಿಗಳ ನಡುವೆ ಶಿಕ್ಷಕರು ಕೂಡ ಸ್ಮಾರ್ಟ್ ಆಗಬೇಕಾಗಿದ್ದು, ಶಿಕ್ಷಕರು ಇದನ್ನು ಅರಿತುಕೊಂಡು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಕೇವಲ ಸೆಪ್ಟೆಂಬರ್ 5 ರಂದು ಮಾತ್ರ ಶಿಕ್ಷಕರ ದಿನಾಚರಣೆ ಆಗದೆ, ವಿದ್ಯಾರ್ಥಿಗಳಿಗೆ ಪ್ರತಿ ದಿನವೂ ಶಿಕ್ಷಕರ ದಿನವಾಗಿರುತ್ತದೆ. ವಿದ್ಯಾರ್ಥಿಗಳು ಪ್ರತಿ ಕ್ಷಣದಲ್ಲೂ ಶಿಕ್ಷಕರನ್ನು ಮಾದರಿಯಾಗಿ ನೋಡುವುದರಿಂದ, ಶಿಕ್ಷಕರ ಜವಾಬ್ದಾರಿ ಮಹತ್ವದ್ದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ,  ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ, ಶಿಕ್ಷಕ ಸಮೂಹವು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮಾರ್ಗದರ್ಶನ ಮತ್ತು ಸೇವೆಗಳಿಗೆ ಅಭಿನಂದನೆಗಳನ್ನು ತಿಳಿಸಿದರು. ಉತ್ತಮ ಶಿಕ್ಷಕರು, ವಿದ್ಯಾರ್ಥಿಗಳ ಜೀವನವನ್ನು ರೂಪಿಸುವುದು ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳಿಗೆ ಜೀವನದ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಬೆಳೆಸುತ್ತಾರೆ ಎಂದು ಹೇಳಿದರು.


ಕಾರ್ಯಕ್ರಮದ ಗೌರವ ಅತಿಥಿಗಳಾಗಿ  ರಕ್ಷಕ - ಶಿಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ಅನಿಲ್ ರೈ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಬಿ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ಶಿಕ್ಷಕರಿಗೆ ಶುಭಾಶಯ ಕೋರಿದರು. ದ್ವಿತೀಯ ವಿಜ್ಞಾನ ವಿಭಾಗದ ಅಪೂರ್ವ ಶಿಕ್ಷಕರ ದಿನಾಚರಣೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. 


ಕಾಲೇಜಿನ  ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೀಡಿದರು. ರಕ್ಷಕ - ಶಿಕ್ಷಕ ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ/ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿನಿ ಸ್ಟೆಫಿ ಪಿ ಅತಿಥಿಗಳನ್ನು ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ತೇಜಸ್‌ ವಂದಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ  ದೀಪ್ತಿ ಕೆ ಸಿ ಕಾರ್ಯಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top