ಸಂತ ಫಿಲೋಮಿನಾ PU ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು  ಇದರ  ಆಶ್ರಯದಲ್ಲಿ ಸೆ 10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ 'ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆ 2025 - 26' ರಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂದಿರುತ್ತಾರೆ.


ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ ಎಸ್ 2ಚಿನ್ನ ಮತ್ತು 2 ಬೆಳ್ಳಿ, ಅನ್ವಿತ್ ರೈ 2 ಚಿನ್ನ  ಮತ್ತು 2 ಬೆಳ್ಳಿ, ಆರ್ ಅಮನ್ ರಾಜ್ 3 ಬೆಳ್ಳಿ ಮತ್ತು 1 ಕಂಚು  ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ತನು ಶ್ರೀ ಎಸ್ ಗೌಡ 2 ಬೆಳ್ಳಿ ಮತ್ತು 1 ಕಂಚು ಪದಕವನ್ನು ಪಡೆದುಕೊಂಡು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ದ್ವಿತೀಯ ವಿಜ್ಞಾನ ವಿಭಾಗದ ಅಧೀನ್ ರೈ ಬಿ 1 ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top