ಈಜು ಸ್ಪರ್ಧೆ: ದಿಗಂತ್ ವಿ. ಎಸ್ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ  ಜಿಲ್ಲಾ ಪಂಚಾಯತ್, ಹಾಸನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಸನ ಇದರ ಸಹಯೋಗದಲ್ಲಿ  ಸೆ 13 ಮತ್ತು 14 ರಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ  ನಡೆದ 'ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟ 2025 - 26' ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ. ಎಸ್ 100ಮೀ, 200ಮೀ ಬ್ಯಾಕ್ ಸ್ಟ್ರೋಕ್, 200 ವೈಯಕ್ತಿಕ ಮೆಡ್ಲೆ, 100ಮೀ ಫ್ರೀ ಸ್ಟೈಲ್ ಮತ್ತು 4×100 ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಚಿನ್ನದ     ಪದಕವನ್ನು ಪಡೆದುಕೊಂಡು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ  ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. 


ಇವರು ಕೂರ್ನಡ್ಕ ನಿವಾಸಿ ವಿಶ್ವನಾಥ್ ಮತ್ತು ವೀಣಾ ಕುಮಾರಿ ದಂಪತಿಗಳ ಪುತ್ರ. ಇವರಿಗೆ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top