ವಿದ್ಯಾಭಾರತಿ ರಾಜ್ಯ ಹಾಗೂ ಪ್ರಾಂತಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Upayuktha
0

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ



ಪುತ್ತೂರು: ಕಲ್ಕಮಿ ಹೈಸ್ಕೂಲ್ ಚಿತ್ತಾಪುರ, ಕಲ್ಬುರ್ಗಿ ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಹಾಗೂ ಪ್ರಾಂತಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ. 


ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ ಎ, ಪುಲಕಿತಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮನ್ವಿತಾ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top