ವಿವೇಕಾನಂದ PU ಕಾಲೇಜಿನಲ್ಲಿ ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟ

Upayuktha
0



ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಡೆಸುವ ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ, ವಿವೇಕಾನಂದ ಕಾಲೇಜಿನ ಆವರಣದ ಮೈದಾನದಲ್ಲಿ ನಡೆಯಿತು. 


ಈ ಪಂದ್ಯಾಟವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿ ಚರಣ್ ರೈ ಎಂ ಉದ್ಘಾಟಿಸಿದರು. ಈ ಪಂದ್ಯಾಟದಲ್ಲಿ ಸುಮಾರು 20 ಪದವಿಪೂರ್ವ ಕಾಲೇಜಿನ ತಂಡಗಳು ಭಾಗವಹಿಸಿದ್ದು, ಬಾಲಕರ ವಿಭಾಗದಲ್ಲಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಪ್ರಥಮ, ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. 


ಹಾಗೆಯೇ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಕುಂಬ್ರ ಪ್ರಥಮ, ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್, ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ, ಯತೀಶ್ ಮತ್ತು ವಿವಿಧ ಸಂಸ್ಥೆಗಳ ದೈಹಿಕಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top