ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿವೆ: ಶ್ರೀಕಾಂತ ಶೆಟ್ಟಿ

Upayuktha
0


ಪುತ್ತೂರು:
ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರುಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಅವರ ಮಾತುಗಳು ಪಾಶ್ಚಿಮಾತ್ಯ ದೇಶಗಳಿಗೆ ಭಾರತದ ಮೇಲಿರುವ ದೃಷ್ಟಿಕೋನ ಬದಲಿಸುತ್ತದೆ. ವಿವೇಕಾನಂದರು ನಾಯಕರಿಗೆ ನಾಯಕ. ಭಾರತದ ಋಷಿ ಪರಂಪರೆಯ ಪ್ರತಿನಿಧಿ ವಿವೇಕಾನಂದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ" ಎಂದು ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. 


ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ “ವಿವೇಕ ಸ್ಮೃತಿ” ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದರು.


ವಿವೇಕಾನಂದ ಸಂಶೋಧನಾ ಕೇಂದ್ರದ ಡೀನ್ ಡಾ. ವಿಜಯ ಸರಸ್ವತಿ ಪ್ರಾಸ್ತವಿಕವಾಗಿ ಮಾತನಾಡಿ, "ಸ್ವಾಮಿ ವಿವೇಕಾನಂದರ ಚಿಂತನೆಗಳು ನಮ್ಮೆಲ್ಲರಲ್ಲೂ ಜಾಗೃತವಾಗಬೇಕು. ಜಗತ್ತಿಗೆ ಶಾಂತಿ ಸಂದೇಶ ನೀಡಿದ ಮಹಾನ್ ದಾರ್ಶನಿಕ ವಿವೇಕಾನಂದರು. ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ  ಉಪನ್ಯಾಸ ಮಾಲಿಕೆ "ವಿವೇಕ ಸ್ಮೃತಿ"ಯ ಮೊದಲ 12 ಮಾಲಿಕೆಗಳು ಪುಸ್ತಕ ರೂಪದಲ್ಲಿ ಸಮಾಜಕ್ಕೆ ಕೊಡುಗೆಯಾಗಿ ಮೂಡಿಬಂದಿದೆ. ವಿವೇಕ ಸ್ಮೃತಿ ಸರಣಿ ಮಾಲಿಕೆ ಸಂಸ್ಥೆಗೆ ದಿಕ್ಸೂಚಿಯಾಗಿ ಮೂಡಿಬರಲಿ ಎಂದರು.


ಕಾಲೇಜು ಆಡಳಿತ ಮಂಡಳಿ ಸಂಚಾಲಕ, ನ್ಯಾಯವಾದಿ ಮುರಳಿ ಕೃಷ್ಣ ಕೆ. ಎನ್. ಅದ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯ್ಕ್ ಬಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಹೆಚ್.ಜಿ. ಶ್ರೀಧರ್, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್. ಉಪಸ್ಥಿತರಿದ್ದರು.


ಆಂಗ್ಲ ವಿಭಾಗದ ಉಪನ್ಯಾಸಕಿ ಡಾ. ನಿಶಿತಾ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ವಂದಿಸಿ, ದ್ವೀತಿಯ ಎಂಕಾಂ ವಿದ್ಯಾರ್ಥಿ ಅನನ್ಯ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top