ವೈಟ್ ಲಿಫ್ಟಿಂಗ್ ಸ್ಪರ್ಧೆ : ದಿಶಾನ್ ಎಂ ಗೆ ಪ್ರಶಸ್ತಿ

Upayuktha
0



ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳು ಇದರ ಸಂಯುಕ್ತ ಆಶ್ರಯದಲ್ಲಿ ಸೆ 13 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ' ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2025 - 26' ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ತೃತೀಯ ಸ್ಥಾನವನ್ನುಪಡೆದುಕೊಂಡಿರುತ್ತಾರೆ. 


ಇವರು ಆರ್ಯಾಪು ನಿವಾಸಿ ಬಾಬು ಮರಿಕೆ ಹಾಗೂ ಪವಿತ್ರಾ ಎಂ ದಂಪತಿಗಳ ಪುತ್ರ. ಇವರಿಗೆ ಅಶ್ವತ್ ಕೆ. ಎಸ್ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top