ವಿವೇಕಾನಂದ ಫಾರ್ಮಸ್ಯೂಟಿಕಲ್ ಸೈನ್ಸ್ ಸಂಸ್ಥೆ; ವಿಶ್ವ ಫಾರ್ಮಸಿಸ್ಟ್ ದಿನಾಚರಣೆ – 2025

Upayuktha
0



ಪುತ್ತೂರು: ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸ್ಯೂಟಿಕಲ್ ಸೈನ್ಸ್, ನೆಹರುನಗರ, ಪುತ್ತೂರು ಸಂಸ್ಥೆಯಲ್ಲಿ ಸೆಪ್ಟೆಂಬರ್ 25, 2025 ರಂದು ವಿಶ್ವ ಫಾರ್ಮಸಿಸ್ಟ್ ದಿನವನ್ನು ಆಚರಿಸಲಾಯಿತು. “ಥಿಂಕ್ ಹೆಲ್ತ್, ಥಿಂಕ್ ಫಾರ್ಮಸಿಸ್ಟ್” ಎಂಬ ವಿಷಯಾಧಾರಿತವಾಗಿ ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ಸೆಮಿನಾರ್ ಹಾಲ್ನಲ್ಲಿ ಜರುಗಿತು. 


ಕಾರ್ಯಕ್ರಮವು ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಯಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ. ಅವರು ಎಲ್ಲ ಅತಿಥಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಹಾರ್ದಿಕವಾಗಿ ಸ್ವಾಗತಿಸಿದರು.


ಕಾರ್ಯಕ್ರಮದ ಗೌರವ ಅತಿಥಿಯಾಗಿ ಯು.ಜಿ. ರಾಧ (ಉದ್ಯಮಿ, ಕೈಲಾರ್ ಮೆಡಿಕಲ್ಸ್, ಉಪ್ಪಿನಂಗಡಿ ಮತ್ತು ಸಂಚಾಲಕರು, ಶ್ರೀರಾಮ ಶಾಲೆ) ಭಾಗವಹಿಸಿ ಫಾರ್ಮಸಿಸ್ಟ್ ವೃತ್ತಿಯ ಮಹತ್ವವನ್ನು ಪ್ರತಿಪಾದಿಸಿದರು. ಅವರನ್ನು ಕಾರ್ಯಕ್ರಮದಲ್ಲಿ ಗೌರವಯುಕ್ತವಾಗಿ ಸನ್ಮಾನಿಸಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ್ ಫಾರ್ಮಸ್ಯೂಟಿಕಲ್ ಸೈನ್ಸ್ ಕಾಲೇಜಿನ ಫಾರ್ಮಕಾಲಜಿ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅನೂಪ್ ಕಿಶೋರ್ ಅವರು “ಫಾರ್ಮಸಿಸ್ಟ್ – ಹೀಲಿಂಗ್ ಬಿಯಾಂಡ್ ಮೆಡಿಸಿನ್” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು.  ಅವರು “ಫಾರ್ಮಸಿಸ್ಟ್ ಕೇವಲ ಔಷಧ ವಿತರಕರಷ್ಟೇ ಅಲ್ಲ, ಸಮಾಜದಲ್ಲಿ ಆರೋಗ್ಯ ಸೇವೆಯ ಪ್ರಮುಖ ಅಂಗ" ಎಂದು ತಿಳಿಸಿದರು. 


ರೋಗಿಗಳಿಗೆ ಔಷಧಿಯ ಬಗ್ಗೆ ಮಾಹಿತಿ  ಕೊಡುವುದರಲ್ಲಿ ಫಾರ್ಮಸಿಸ್ಟ್ ಪಾತ್ರ ಅತಿ ಮಹತ್ವದ್ದಾಗಿದೆ ಎಂದು ಅವರು ಒತ್ತಿಹೇಳಿದರು. ಇದರ ಜೊತೆಗೆ, ಹೊಸ ಔಷಧ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿಯೂ ಫಾರ್ಮಸಿಸ್ಟ್ ಪ್ರಮುಖವಾಗಿ ಕೊಡುಗೆ ನೀಡುತ್ತಿದ್ದಾರೆ ಎಂಬುದನ್ನು ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ ವಹಿಸಿದರು. ಅವರು ವಿಶ್ವ ಫಾರ್ಮಸಿಸ್ಟ್ ದಿನದ ಅಂಗವಾಗಿ ಎಲ್ಲರಿಗೂ ಹಾರ್ದಿಕ ಶುಭಾಶಯ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ಪ್ರಾಧ್ಯಾಪಕರಾದ ಸಂಧ್ಯಾ ಮತ್ತು ವಿದ್ಯಾ ಹಾಗೂ ಧನ್ಯವಾದ ಸಮರ್ಪಣೆಯನ್ನು ಶಂತನು ಕಾಮತ್ ಅವರು ನೆರವೇರಿಸಿದರು. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಯಶಸ್ವಿಯಾಗಿ ನೆರವೇರಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top