ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆಇವರ ಆಶ್ರಯದಲ್ಲಿ ಬಿ.ಇ.ಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ ಡಾ. ಶಿವರಾಮ ಕಾರಂತರ ಸಾಹಿತ್ಯ :ಮರುಚಿಂತನೆ ಎಂಬ ವಿಷಯದಲ್ಲಿಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೆಪ್ಟಂಬರ್ 12 ರಂದುಬೆಳಿಗ್ಗೆ 10 ಗಂಟೆಯಿಂದ ಬೆಂಗಳೂರಿನ ಬಿ.ಇ.ಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ ಕಾಲೇಜಿನ ವಿಚಾರ ಸಂಕಿರಣ ಸಭಾಂಗಣದಲ್ಲಿಏರ್ಪಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ನಾಡಿನಗಣ್ಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದೆ. ಭಾಗವಹಿಸಲು ಇಚ್ಛಿಸುವವರು ದೂ.ಸಂಖ್ಯೆ 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


