ದಕ್ಷಿಣ ವಲಯ ಅಥ್ಲೆಟಿಕ್ಸ್ : ನಿಟ್ಟೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಬೆಳ್ಳಿ ಪದಕ

Upayuktha
0



ನಿಟ್ಟೆ: ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 23 ರಿಂದ 25 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ ವಿಭಾಗದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ 5,000 ಮೀಟರ್ ಓಟ ಮತ್ತು 3,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿರುತ್ತಾರೆ. 


ಇದೇ ವಯೋವಿಭಾಗದಲ್ಲಿ 100 ಮೀಟರ್ ಓಟ ಮತ್ತು 4x100 ಮೀ ರಿಲೇಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸ್ತುತಿ ಪಿ ಶೆಟ್ಟಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿರುವರು.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top